(fasal bima yojana:) ಕೃಷಿ ಇಲಾಖೆಯಿಂದ 2023-24 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿ ಮುಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯವರಿಂದ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಬಳ್ಳಾರಿ ತಾಲ್ಲೂಕಿನಲ್ಲಿ 23 ಪ್ರಸ್ತಾವನೆಗಳು ಹಾಗೂ ಕುರುಗೋಡು ತಾಲ್ಲುಕಿನಲ್ಲಿ 3 ಪ್ರಸ್ತಾವನೆಗಳು ತಿರಸ್ಕೃತಗೊಂಡಿದ್ದು, ತಿರಸ್ಕೃತಗೊಂಡ ರೈತರ ಪ್ರಸ್ತಾವನೆ ವಿವರಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಆದ್ದರಿಂದ ರೈತರು ಆಕ್ಷೇಪಣೆಗಳು ಇದ್ದಲ್ಲಿ ಮಾ.10 ರೊಳಗೆ ಸಲ್ಲಿಸಬಹುದು. ನಿಗದಿತ ಸಮಯದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸದಿದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಅಸಿಂಧುವೆಂದು ಪರಿಗಣಿಸಲಾಗುವುದು.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಮುಖ್ಯ ಉದ್ದೇಶ ಏನು?:(Pradhan Mantri Fasal Bima Yojana)
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ. 2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿರುತ್ತದೆ.
ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು. ವಿಮಾ ಅರ್ಜಿಗಳು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಲಭ್ಯವಿದ್ದು, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅರ್ಜಿಯನ್ನು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದಾಗಿದೆ.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ಅಗತ್ಯವಿರುವ ದಾಖಲೆಗಳು ಯಾವುದು?;
* ಆಧಾರ್ ಕಾರ್ಡ್ (Aadhaar card)
* ಪಾನ್ ಕಾರ್ಡ್ (PAN card)
* ರೈತರ ಭೂ ದಾಖಲೆ (Land record)
* ವಿಳಾಸ ಪುರಾವೆ (Address proof)
* ಆದಾಯ ಪ್ರಮಾಣ ಪತ್ರ (Income certificate)
* ಜಾತಿ ಪ್ರಮಾಣ ಪತ್ರ (Caste certificate)
* ಬಳಕೆಯಲ್ಲಿರುವ ಫೋನ್ ಸಂಖ್ಯೆ (Phone no)
* ಪಾಸ್ ಪೋರ್ಟ್ ಗಾತ್ರದ ಫೋಟೋ (Passport size photo)
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?:
ಇನ್ನು ಕೇಂದ್ರ ಸರ್ಕಾರವು ಪರಿಚಯಿಸುತ್ತಿರುವ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಲಾಭ ಪಡೆಯಲು ಯೋಜನೆಯ ಮಾಹಿತಿಯನ್ನು ಸಂರಕ್ಷಣೆ ತಂತ್ರಾಂಶದಲ್ಲಿ ಪಡೆಯಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಅಥವಾ https://pmfby.gov.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಹಿಂದುಸ್ತಾನಿ ಟೈಮ್ಸ್ ಕನ್ನಡ

























Leave a Reply